ರೈಲು ದುರಂತದಿಂದ ಸಂಕಷ್ಟಕ್ಕೆ ಸಿಲುಕಿದ ಕ್ರೀಡಾಪಟುಗಳ ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.3 : ನಿನ್ನೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ ಬರಲು ಪರಿತಪಿಸುತ್ತಿದ್ದ ಕ್ರೀಡಾಪಟುಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೆರವು ನೀಡಿದ್ದಾರೆ.

ಕೊಲ್ಕತ್ತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು. ಆದರೆ ಒಡಿಶಾದ ರೈಲು ದುರಂತದಿಂದಾಗಿ ತಂಡಕ್ಕೆ ವಾಪಸ್ಸು ರಾಜ್ಯಕ್ಕೆ ಮರಳಲು ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವೀಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವೀಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ರಾಜ್ಯ ಸರಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್  ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ, ಊಟದ ವ್ಯವಸ್ಥೆ ಒದಗಿಸಿದೆ.

ಈ ವಿಚಾರವಾಗಿ ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!