ಮಣಿಪಾಲ: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ- 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ

ಮಣಿಪಾಲ: ಈಶ್ವರನಗರ ಸಮೀಪದ ಹಕುನ ಮಟಾಟ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ.

ರೆಸ್ಟೋರೆಂಟ್‌ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!