ಕರಾವಳಿ ಜಿಲ್ಲೆಗಳಲ್ಲಿ ಜೂ.7ರವರೆಗೆ ಭಾರೀ ಮಳೆಯಾಗಲಿದೆ- ಹವಾಮಾನ ಇಲಾಖೆ
ಬೆಂಗಳೂರು, ಜೂ.4: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ.7ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಜೂ.7ರ ವರೆಗೆ ಮಳೆಯಾಗಲಿದೆ.
ವಾಡಿಕೆಯಂತೆ ನೈರುತ್ಯ ಮುಂಗಾರು ಜೂ.1ರಂದು ಕೇರಳ ಪ್ರವೇಶಿಸ ಬೇಕಿತ್ತು.ಆದರೆ ಈ ಬಾರಿ ನಾಲ್ಕು ದಿನಗಳ ಕಾಲ ವಿಳಂಬವಾಗಿದೆ. ಇದೀಗ ಕೆಲವು ದಿನ ತಡವಾಗಬಹುದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಮೇ 29ರಂದು ಮುಂಗಾರು ಆರಂಭವಾಗಿತ್ತು. ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿದ ದಿನಾಂಕದ ಕಾರ್ಯಾಚರಣೆಯ ಮುನ್ಸೂಚನೆಗಳು 2015 ಹೊರತುಪಡಿಸಿ 18 ವರ್ಷಗಳಲ್ಲಿ ಸರಿಯಾಗಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.