ಡಿವೈಡರ್ಗೆ ಕಾರು ಡಿಕ್ಕಿ-ವಿರುದ್ದ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ
ಕುಂದಾಪುರ: ಕಾರು ಡಿವೈಡರ್ ದಾಟಿ ಪಲ್ಟಿಯಾಗಿ ಮತ್ತೊಂದು ಕಡೆಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿಯಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾಗಿದ್ದು, ಸ್ವಲ್ಪದರಲ್ಲೇ ದೊಡ್ಡ ಅವಘಢ ತಪ್ಪಿದೆ ಎನ್ನಲಾಗಿದೆ.
ಕೆಳಕ್ಕುರುಳಿ ಬಿದ್ದಿದ್ದರೆ ಇನ್ನಷ್ಟು ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.