ಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ನಚ್ಚರಿಕೆಗೆ ಸಿಎಂ ಸೂಚನೆ
ಬೆಂಗಳೂರು: ಉಡುಪಿ,ಚಿಕ್ಕಮಗಳೂರು,ಬೆಂಗಳೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉಡುಪಿ,ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ,ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ,ರಾಜ ಕಾಲುವೆ,ತಗ್ಗು ಪ್ರದೇಶಗಳಲ್ಲಿ ವಿಶೇಷ ಗಮನಹರಿಸುವಂತೆ ಸೂಚನೆ ನೀಡಿದ್ದು,ಎಲ್ಲಾ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ ಅಂತ ಆದೇಶಿಸಿದ್ದಾರೆ.
ಮಳೆಯಿಂದ ಅತಿವೃಷ್ಠಿ ಕಂಡು ಬಂದಿರುವ ಪ್ರದೇಶಗಳಲ್ಲಿ ಜನರನ್ನು ಸುರಕ್ಷತೆ ಸ್ಥಳಾಂತರ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಅವರು ಸೂಚನೆ ನೀಡಿದ್ದಾರೆ.ಪ್ರವಾಹ ಪರಿಸ್ಥಿತಿ ಕಂಡು ಬಂದಿರುವ ಪ್ರದೇಶಗಳಿಗೆ ಎಸ್ ಡಿಆರ್ ಎಫ್,ಎನ್ ಡಿಆರ್ ಎಫ್ ತಂಡಗಳನ್ನು ರವಾನಿಸಿ ಜನರ ಪ್ರಾಣ ರಕ್ಷಿಸುವಂತೆಯೂ ಅವರು ಇದೆ ವೇಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ರವಾನೆ: ಬೊಮ್ಮಾಯಿ
ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಅಧಿಕವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಜೆ ಜಲಾಶಯದ ಬಳಿಯ ಕಿರು ಜಲವಿದ್ಯುತ್ ಸ್ಥಾವರದ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶೀಘ್ರವೇ ಜನರ ಪ್ರಾಣ ರಕ್ಷಣೆಗೆ ತುರ್ತು ಕ್ರಮಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು.
ಪ್ರವಾಹದಲ್ಲಿ 250 ಜನ ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ಎಸ್‌ಡಿಆರ್‌ಎಫ್ ತಂಡ ದೌಡಾಯಿಸಿದೆ ಎಂದರು.