ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳಾದ ಸಾಕ್ಷಿ, ವಿನೇಶ್ ಹಾಗೂ ಬಜರಂಗ್ ಪುನಿಯ
ಹೊಸದಿಲ್ಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಮಾಹಿತಿಗಳ ಪ್ರಕರ ಭಾರತೀಯ ರೈಲ್ವೆಯಲ್ಲಿ ಉದ್ಯೋಗದಲ್ಲಿರುವ ಮೂವರೂ ಕುಸ್ತಿಪಟುಗಳು ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯ ಅವರು ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಆದಾಗ್ಯೂ, ಇತ್ತೀಚಿನ ವರದಿಗಳು ಈ ಮೂವರು ಈಗ ಪ್ರತಿಭಟನೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಮತ್ತು ಆಯಾ ರೈಲ್ವೆ ಉದ್ಯೋಗಗಳಿಗೆ ಮರಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಕುಸ್ತಿಪಟುಗಳ ನಿಲುವು ಬದಲಾವಣೆಯ ಹಿಂದಿನ ನಿಖರವಾದ ಕಾರಣಗಳನ್ನು ಕುಸ್ತಿಪಟುಗಳು ಅಥವಾ ಅವರ ಪ್ರತಿನಿಧಿಗಳು ಬಹಿರಂಗಪಡಿಸಿಲ್ಲ.