ಮೂಡಬಿದಿರೆ: ಬೈಕ್ಗೆ ಬಸ್ ಢಿಕ್ಕಿ- ಕಾಲೇಜ್ ವಿದ್ಯಾರ್ಥಿ ಮೃತ್ಯು
ಮೂಡುಬಿದಿರೆ: ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಹಂಡೇಲು ಎಂಬಲ್ಲಿ ಖಾಸಗಿ ಬಸ್ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲರ್ಸ್ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ ಆಚಾರ್ಯ (19) ಮೃತಪಟ್ಟವರು.
ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಮೂಡುಬಿದಿರೆ ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.