ಉಭಯ ಜಿಲ್ಲೆಗಳಲ್ಲಿ ಭಾರಿ ಮಳೆ ಅಂತಿಮ ವರ್ಷದ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು(ಉಡುಪಿ ಟೈಮ್ಸ್ ವರದಿ): ಇತ್ತೀಚೆಗಷ್ಟೇ ಆರಂಭಗೊಂಡ ಈ ಬಾರಿಯ ಪದವಿ ಮತ್ತು ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆ ಮುಂದೂಡಿದೆ. ಉಭಯ ಜಿಲ್ಲೆಗಳಾದ ಕೊಡಗು ಹಾಗೂ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಣೆ ಯಾಗಿದೆ.​ ​ಈ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾನಿಲಯ ಸೋಮವಾರ(ಸ 21 ) ರಂದು ಸ್ನಾತಕ ಮತ್ತು ಪದವಿ ಅಂತಿಮ ವರ್ಷದ ಪರೀಕ್ಷೆಯನ್ನು ಮುಂದೂಡಿದೆ.​
ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು,ಭಾರೀ ಮಳೆಯ ಕಾರಣ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.​ ​ಆದ್ದರಿಂದ ಸೋಮವಾರದಂದು ನಡೆಯಬೇಕಿದ್ದ ಸ್ನಾತಕ ಮತ್ತು ಪದವಿ ಪರೀಕ್ಷೆಗಳನ್ನು ಸದ್ಯ ಮುಂದೂಡಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಸದ್ಯದಲ್ಲಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.

1 thought on “ಉಭಯ ಜಿಲ್ಲೆಗಳಲ್ಲಿ ಭಾರಿ ಮಳೆ ಅಂತಿಮ ವರ್ಷದ ಪದವಿ ಪರೀಕ್ಷೆಗಳು ಮುಂದೂಡಿಕೆ

Leave a Reply

Your email address will not be published. Required fields are marked *

error: Content is protected !!