ವಾಯುಭಾರ ಕುಸಿತ ಚಂಡಮಾರುತ ಭೀತಿ- ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಉಡುಪಿ, ಜೂ.6(ಉಡುಪಿ ಟೈಮ್ಸ್ ವರದಿ) ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಚಂಡಮಾರುತ ಉಂಟಾಗಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆಯಿರುತ್ತದೆಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು/ ಪ್ರವಾಸಿಗರು ಸಮುದ್ರ/ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

ಮಕ್ಕಳು/ ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ/ ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ಸೇರಬೇಕು ಎಂದು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!