ಉಡುಪಿ: ಕುತ್ಪಾಡಿ‌ ನಿವಾಸಿ ನಾಪತ್ತೆ

ಉಡುಪಿ, ಜೂ.6: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಪ್ರಕಾಶ್ ಸದಾಶಿವ ಶೆಟ್ಟಿ (31) ಎಂಬ ವ್ಯಕ್ತಿಯು ಜೂ.3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!