ಮದ್ಯದ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!
ಬೆಂಗಳೂರು: ಎಣ್ಣೆ ಪ್ರಿಯರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿದೆ.
ಮದ್ಯದ ದರದಲ್ಲಿ ಪ್ರತಿ ಬಾಟಲ್ ಗೆ 10 ರೂ.ರಿಂದ 20ರವರೆಗೆ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯಲ್ಲಿ ಹೆಚ್ಚಳವಾಗಲಿದೆ. ಗ್ಯಾರಂಟಿ ಯೋಜನೆಗಳ ಜಾರಿಗೆ ಅಗತ್ಯವಾಗಿರುವ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ರಾಜ್ಯ ಸರ್ಕಾರವು ಈ ದರ ಹೆಚ್ಚಿಸುವ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.
ಬಡ್ ವೈಸರ್ ಬಿಯರ್ ದರ 198 ರೂ. ರಿಂದ 220ಕ್ಕೆ ಹೆಚ್ಚಳವಾಗಲಿದೆ. ಕಿಂಗ್ ಫಿಷರ್ ಬಿಯರ್ ದರವನ್ನ ರೂ.160ರಿಂದ 170ಕ್ಕೆ ಏರಿಕೆ ಮಾಡಲಾಗಿದೆ. ಯುಬಿ ಪ್ರೀಮಿಯಂ ದರ ರೂ.125ರಿಂದ 135, ಸ್ಟ್ರಾಂಗ್ ದರ ರೂ.130ರಿಂದ 135ಗೆ ಹೆಚ್ಚಳ ಮಾಡಲಾಗಿದೆ.