ಮಲ್ಪೆ ಪಡುಕರೆ ಭಾಗಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ: ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಕಡೆಕಾರ್ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಭಾಗಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಭಾವ್ಯ ಕಡಲ್ಕೊರೆತ ಪ್ರದೇಶಗಳನ್ನು ಗುರುತಿಸಿ ಕಡಲ್ಕೊರೆತ ತಡೆಗೆ ಪೂರಕ ಕಾಮಗಾರಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುತ್ಪಾಡಿ ಪಡುಕರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಕೊಠಡಿಗೆ ಅಂಗನವಾಡಿಯನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮಲ್ಪೆ ಪಡುಕರೆಯ ನದಿದಂಡೆ ಸಂರಕ್ಷಣೆ ಕಾಮಗಾರಿಯ ಪರಿಶೀಲನೆ ನಡೆಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಲ್ಪೆ ಸೆಂಟ್ರಲ್ ವಾರ್ಡಿನ ಶಾಂತಿನಗರದ 21 ಕುಟುಂಬದ ಹಕ್ಕು ಪತ್ರದ ಮನವಿ ಸ್ವೀಕರಿಸಿದರು, ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಯೋಜನೆ ರೂಪಿಸುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಪಡುಕರೆ ಬೀಚ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಅರುಣ್ ಭಂಡಾರಿ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಇಲಾಖೆ, ರೋಶನ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಜನ ಸೇವಾ ಹಾಗೂ ಸಬಲೀಕರಣ ಇಲಾಖೆ, ಜಯರಾಜ್, ಸಹಾಯಕ ಅಭಿಯಂತರರು, ಬಂದರು ಮತ್ತು ಮೀನುಗಾರಿಕಾ ಇಲಾಖೆ, ಸಿದ್ದೇಶ್, ಪಿಡಿಒ, ಕಡೇಕಾರ್ ಗ್ರಾಮ ಪಂಚಾಯತ್, ವಸಂತಿ, ಪಿಡಿಒ, ಅಂಬಲಪಾಡಿ ಗ್ರಾಮ ಪಂಚಾಯತ್, ಅಂಬಲಪಾಡಿ ಪಂಚಾಯತ್ ಅಧ್ಯಕ್ಷರಾದ ರೋಹಿಣಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ರಾಜೇಂದ್ರ ಪಂದುಬೆಟ್ಟು, ನಗರಸಭಾ ಸದಸ್ಯರಾದ ವಿಜಯ ಕುಂದರ್, ಪಂಚಾಯತ್ ಸದಸ್ಯರಾದ ವಸಂತ್ ಪ್ರವೀಣ್, ವೇದಾವತಿ, ಪ್ರಮೋದ್, ಸುಭಾಷಿಣಿ, ಸ್ಥಳೀಯರಾದ ಶಂಕರ್, ಭುವನ್, ನಾಗೇಶ್ ಬಂಗೇರ, ಗಣೇಶ್ ಬಂಗೇರ, ಪುರಂದರ ಕೋಟ್ಯಾನ್, ಹೇಮಂತ್ ಖಾರ್ವಿ, ವಸುಮತೀಶ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!