ಇನ್ನೆರೆಡು ದಿನ ಜಿಲ್ಲೆಯಲ್ಲಿ ಮಳೆ: ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಆದೇಶ

ಉಡುಪಿ (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ನದಿ ತೀರದ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಹಾಗೂ ಕುದ್ರುಗಳಲ್ಲಿ ವಾಸಿಸುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆ.ಮೀ ಮಳೆಯಾಗಿದ್ದು ಜಿಲ್ಲೆಯ ಹೆಚ್ಚಿನ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು ಇದರಿಂದ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡ 700 ಕುಟುಂಬಗಳ 2500 ಕ್ಕೂ ಹೆಚ್ಚಿನ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸಗಳನ್ನು NDRF, ಕರಾವಳಿ ರಕ್ಷಣಾ ಪಡೆ, ಸ್ಥಳೀಯ ಸಂಘ ಸಂಸ್ಥೆಗಳು ಕೈಜೋಡಿಸಿ ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ನೆರವಾದರು.

ಈಗಾಗಲೇ ಜಿಲ್ಲೆಯ ತಹಶೀಲ್ದಾರ್ ತಂಡ ಪರಿಹಾರ ಕೇಂದ್ರಗಳನ್ನು ಗುರುತಿಸಿದ್ದು ನದಿ ತೀರದ ವಾಸಿಗಳು ಇಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಜಿಲ್ಲಾಡಳಿತದಿಂದ ಊಟ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!