ಬೈಲೂರು ದೈವಸ್ಥಾನದ ಕಾಣಿಕೆ ಡಬ್ಬಿ ಕಳವು: ಆರೋಪಿಗೆ ಶಿಕ್ಷೆ
ಉಡುಪಿ, ಜೂ.7: ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2022 ಅಕ್ಟೋಬರ್ 30 ರಂದು ಬೆಳಗ್ಗೆ ಪ್ರಕಾಶ್ ಎಂಬಾತನು ಬಡಗುಬೆಟ್ಟು ಗ್ರಾಮದ ಬೈಲೂರು ಶ್ರೀ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ, ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯದ ನ್ಯಾಯಾಧೀಶ ವಿಘ್ನೇಶ್ ಕುಮಾರ್ ಅವರು ಆರೋಪಿ ಪ್ರಕಾಶ್‌ಗೆ ಭಾ.ದಂ.ಸಂ.ಕಲA: 380 ಮತ್ತು 457 ರ ಅಡಿ 1 ವರ್ಷ 6 ತಿಂಗಳು ಕಠಿಣ ಸಜೆ ಮತ್ತು ರೂ.2000 ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ 1 ತಿಂಗಳ ಸಾಧಾರಣಾ ಶಿಕ್ಷೆ ವಿಧಿಸಿ, ತೀರ್ಪು ನೀಡಿರುತ್ತಾರೆ.
ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿರುತ್ತಾರೆ.