ಕಜ್ಕೆ ಶಾಖಾ ಮಠದಲ್ಲಿ ದೋಷ ಪರಿಹಾರಕ್ಕಾಗಿ ಆಶ್ಲೇಷ ಬಲಿಪೂಜೆ
ಕಜ್ಕೆ: ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠದ ಕಜ್ಕೆ ಶಾಖಾ ಮಠದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ನಿರ್ಮಾಣದ ಹಿನ್ನಲೆಯಲ್ಲಿ ನಡೆಸಿದ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದ ದೋಷ ಪರಿಹಾರಕ್ಕಾಗಿ ಆಶ್ಲೇಷಬಲಿ ಪೂಜೆಯು ಮಂಗಳವಾರ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.
ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠಾಧಿಪತಿ ಶ್ರೀಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಸಮ್ಮುಖದಲ್ಲಿ ವಿದ್ವಾನ್ ಹೆಬ್ರಿ ಚಂದ್ರಕಾಂತ್ ಶರ್ಮ ನೇತ್ರತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಕ್ಷೇತ್ರದ ಪರಿವಾರ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ ಪೂಜೆ ನಡೆಯಿತು.
ವಿವಿಧ ಸಮಿತಿಗಳ ಮುಖ್ಯಸ್ಥರು ಪದಾಧಿಕಾರಿಗಳು, ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಹೆಬ್ರಿ ಮಠದಬೆಟ್ಟು ರಾಜೇಶ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸುಕುಮಾರ್ ಮುನಿಯಾಲ್, ಚಾತುರ್ಮಾಸ್ಯ ವೃತಾನುಷ್ಠಾನ ಸಮಿತಿಯ ಅಧ್ಯಕ್ಷ ವಿಶ್ವನಾಥ ಆಚಾರ್ಯ ಕಲ್ಗೋಳಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ಯ ಕೊಂಜಾಡಿ, ಸೇರಿದಂತೆ ವಿವಿಧ ಗಣ್ಯರು, ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.