ಕೇಂದ್ರ ಸಚಿವರೇ ಜನರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನಿಲ್ಲಿಸಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸಿ- ಕೃಷ್ಣಮೂರ್ತಿ
ಉಡುಪಿ ಜೂ.7(ಉಡುಪಿ ಟೈಮ್ಸ್ ವರದಿ): ಸಂಸದೆ ಶೋಭಾ ಕರಂದ್ಲಾಜೆ ಅವರು, ಹಿಂದೂ ಸಮಾಜದ ಜನರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡುವುದನ್ನು ನಿಲ್ಲಿಸಿ ಅಗತ್ಯ ಇರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ನೀಡಿದ ಅವರು, ಶೋಭಾ ಕರಂದ್ಲಾಜೆ ಅವರು ಹಿಂದೂ ಸಮಾಜದ ಜನರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಹಾಗೂ ಅಗತ್ಯ ಇರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸಬೇಕು. ಅದು ಬಿಟ್ಟು ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡದೆ ಉಳಿದ 10 ತಿಂಗಳಲ್ಲಿ ಉತ್ತಮ ಕೆಲಸ ಮಾಡಿಸಿ ತೋರಿಸಿ ಎಂದು ಆಗ್ರಹಿಸಿದರು
ಉಡುಪಿ ಮಣಿಪಾಲ ಹೆದ್ದಾರಿಯಲ್ಲಿ ಇಂದ್ರಾಳಿ ಸೇತುವೆ ನಿರ್ಮಾಣ ಆಗದೆ ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿದೆ. ಈ ಮಾರ್ಗದಲ್ಲಿ100 ಕ್ಕೂ ಅಧಿಕ ರೋಗಿಗಳನ್ನು ದಿನಾ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ. ಹೀಗಿರುವಾಗ ಆಸ್ಪತ್ರೆಯ ಸಮೀಪದ ಹೆದ್ದಾರಿಯಲ್ಲಿ ರೈಲ್ವೆ ಸೇತುವೆ ನಿರ್ಮಾಣ ಆಗದೆ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.
ಆದರೆ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯೆಯಾಗಿದ್ದರೂ ಇಷ್ಟು ವರ್ಷಗಳಿಂದ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣಗೊಳಿಸವಲ್ಲಿ ಮುತುವರ್ಜಿ ವಹಿಸದೆ, ಸಾರ್ವಜನಿಕರಿಗೆ ಅನೂಕೂಲವಾಗುವ ಅಭಿವೃದ್ಧಿ ಕೆಲಸ ಮಾಡದೆ ಸಮಾಜದ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
He seems to look like a Yakshagsna kalaker