ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ
ಉಡುಪಿ: ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪೊಲೀಸ್ ಉಪನಿರೀಕ್ಷಕರು ಆಗಿ ಕರ್ತವ್ಯ ನಿರ್ವಹಿಸಿದ್ದ, ಪ್ರಸ್ತುತ ಚಿತ್ರದುರ್ಗದಲ್ಲಿ ಪೊಲೀಸ್ ನಿರೀಕ್ಷಕರಾಗಿರುವ ಲಿಂಗರಾಜು (39) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚಿಗೆ ಬೆಂಗಳೂರಿಗೆ ವರ್ಗಾವಣೆಗೊಂಡ ಇವರು, ಅಲ್ಲಿ ಕರ್ತವ್ಯಕ್ಕೆ ನಿಯುಕ್ತಿಗೊಳ್ಳುವ ಮೊದಲೇ ಇಹಲೋಕ ತ್ಯಜಿಸಿದ್ದಾರೆ.