ಮುಂಬಯಿ: ಟ್ರೀ ಕಟ್ಟರ್‌ನಿಂದ ಪ್ರೇಯಸಿಯನ್ನು ತುಂಡರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ!

ಮುಂಬಯಿ: ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್‌ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ಮನೋಜ್ ಸಹಾನಿ (36) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದ ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದ. ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ.

ಬುಧವಾರ ಸಂಜೆ ಫ್ಲಾಟ್‌ ನ ಇತರೆ ಸದಸ್ಯರು ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್‌ ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ.

ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ತುಂಡರಿಸುವ ಮಿಷನ್‌ ನಿಂದ ತುಂಡು ಮಾಡಲಾಗಿದೆ ಎಂದಿದ್ದಾರೆ.

ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್‌ ನಲ್ಲಿ ಬೇಯಿಸಿರ ಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!