ಗೃಹಪ್ರವೇಶವಾದ ಐದೇ ದಿನದಲ್ಲಿ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವತಿ!
ಮಂಗಳೂರು: ನಗರದ ಹೊರವಲಯದ ಕುಂಪಲ ಚಿತ್ರಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ (25) ಎಂಬ ಯುವತಿಯು ವಿದೇಶ ಉದ್ಯೋಗದಲ್ಲಿದ್ದು ಗೃಹಪ್ರವೇಶವಾದ ಐದೇ ದಿನಕ್ಕೆ ಹೊಸ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಶ್ವಿನಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದು ಒಂದುವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಫರಂಗಿಪೇಟೆಯ ಸಂಗೀತ ಎಂಬವರಿಂದ ಮನೆಯೊಂದು ಖರೀದಿಸಿದ್ದು ಜೂನ್ 3ರಂದು ಗ್ರಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ಹೊಸ ಮನೆಯಲ್ಲಿ ನೆಲೆಸಿದ್ದರು.
ಆದರೆ ಗೃಹಪ್ರವೇಶವಾದ 5 ದಿನದಲ್ಲಿ ಅಶ್ವಿನಿ 24 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಡೆತ್ ನೋಟ್ ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿರುವ ಬಗ್ಗೆ ಬರೆದಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ತಿಳಿಸಿದ್ದಾಳೆ.
ಉಳ್ಳಾಲ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.