‘ಗೃಹಲಕ್ಷ್ಮಿ’ ಯೋಜನೆಯ ನಕಲಿ ಅರ್ಜಿ ಜಾಲತಾಣಗಳಲ್ಲಿ ವೈರಲ್!

ಬೆಂಗಳೂರು; 9: ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಮಹತ್ವದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ನಮೂನೆ ಇನ್ನೂ ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಇಲಾಖೆಯ ನಿರ್ದೇಶನಾಲಯ ಕಚೇರಿಯ ಅಧಿಕಾರಿ, ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿ ಇಲಾಖೆಯಿಂದ ಅಧಿಕೃತವಾಗಿ ಅರ್ಜಿ ನಮೂನೆ ಬಿಡುಗಡೆಯಾಗಿಲ್ಲ. ಅದರ ಸಿದ್ಧತೆ ನಡೆಯುತ್ತಿದೆ, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಮೂನೆ ನಕಲಿ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!