ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್- ಪ್ರಸಾದ್‌ರಾಜ್ ಅಭಿನಂದನೆ
June 9, 2023
ಉಡುಪಿ:ರಾಜ್ಯ ಕಾಂಗ್ರೆಸ್ ಸರ್ಕಾರದ,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು,ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆ ಮತ್ತು ವಿಧಾನ ಸಭಾ ಕ್ಷೇತ್ರದ ಸಮಸ್ತ ಮತದಾರರ ಪರವಾಗಿ ನಿಮಗೆ ಶುಭ ಹಾರೈಸುತ್ತಾ ತಮ್ಮ ಅಧಿಕಾರದ ಅವಧಿಯಲ್ಲಿ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ,ಸರ್ವಾ ಜನಾಂಗದ ಸಮಾಜ ನಿರ್ಮಾಣ ಮಾಡಿ,ಮಾದರಿ ಜಿಲ್ಲೆಯಾಗಿ ರೂಪಗೊಳ್ಳಲಿ ಎಂದು ಆಶಿಸುತ್ತೇನೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.