ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಅವರೇನು ಪಿಎಚ್’ಡಿ ಮಾಡಿದ್ದಾರಾ?- ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
 
ಬಿಜೆಪಿ  ಅವಧಿಯ ಪಠ್ಯ ಪರಿಷ್ಕರಣೆ  ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರು ಇವರು. ಅವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ.

ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಸೂಲಿಬೆಲೆ ವಿರುದ್ಧ ಕಿಡಿಕಾರಿದರು. ಚಕ್ರವರ್ತಿ ಸೂಲಿಬೆಲೆಯವರು ಭಗತ್‌ಸಿಂಗ್, ಸುಖದೇವ್ ಅವರ ಬಗ್ಗೆ ಬರೆದಿರುವುದು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಭಗತ್ ಸಿಂಗ್ ಬಗ್ಗೆ ಅಪಾರವಾದ ಗೌರವವಿದೆ. ಅವರ ನಿಜವಾದ ಇತಿಹಾಸ ನಾವು ಹೇಳುತ್ತೇವೆ. ನಾನು ನಾಸ್ತಿಕ ಏಕೆ ಆಗಿದ್ದೇನೆ ಎಂಬ ಭಗತ್ ಸಿಂಗ್ ಪುಸ್ತಕವಿದೆ. ಅದನ್ನು ಚಕ್ರವರ್ತಿ ಸೂಲಿಬೆಲೆ ಓದಲಿ ಸಾಕು. ಇತಿಹಾಸ ತಿರುಚಿಲ್ಲದ ಪಾಠ ನಾವು ಇಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!