ಮಹಿಳೆಯರ ಉಚಿತ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ, ಝರಾಕ್ಸ್ ಸಾಕು- ಗೊಂದಲಗಳಿಗೆ ತೆರೆ

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಉಚಿತ ಪ್ರಯಾಣಕ್ಕೆ ಐಡಿ ಪ್ರೂಫ್ ತೋರಿಸಬೇಕು ಎಂದು ಹೇಳಲಾಗಿತ್ತು. ಆದರೆ ಒರಿಜಿನಲ್ ತೋರಿಸಬೇಕಾ ಅಥವಾ ಝರಾಕ್ಸ್ ಸಾಕಾ ಎಂಬ ಬಗ್ಗೆ ಗೊಂದಲಗಳಿದ್ದವು.

ಹೀಗಾಗಿ ರಾಜ್ಯದ ಹಲವೆಡೆ ಐಡಿ ಪ್ರೂಫ್​ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ, ಮಾತಿನ ಚಕಮಕಿಗಳು ನಡೆದಿದ್ದವು. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಸೋಮವಾರ ಸ್ಪಷ್ಟಪಡಿಸಿದೆ.

ಈ ಮೂಲಕ ಒರಿಜಿನಲ್​ ಐಡಿ ಬೇಕಾ? ಅಥವಾ ಝರಾಕ್ಸ್ ಪ್ರತಿ ಇದ್ದರೆ ಸಾಕಾ? ಎನ್ನುವ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಬಿದ್ದಿದೆ. ಗುರುತಿನ ಚೀಟಿಗೆ ಸಂಬಂಧಿಸಿದಂತೆ ಇಂದು ತಿದ್ದುಪಡಿ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಆಧಾರ್ ಕಾರ್ಡ್ ಹಾಗೂ ವೋಟರ್​ ಐಡಿಯ ಝರಾಕ್ಸ್​ ಪ್ರತಿ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!