ಬ್ರಹ್ಮಾವರ: ವಾರಂಬಳ್ಳಿ ಮಹಿಳೆ ನಾಪತ್ತೆ

ಉಡುಪಿ, ಜೂ.13: ಬ್ರಹ್ಮಾವರ ತಾಲೂಕು ವಾರಂಬಳ್ಳಿ ಗ್ರಾಮದ ಎಸ್.ಎಮ್.ಎಸ್ ಕಾಲೇಜು ಹಿಂಭಾಗದಲ್ಲಿ ವಾಸವಿದ್ದ ಚಂದ್ರಿಕಾ (30) ಎಂಬ ಮಹಿಳೆಯು ಜೂನ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!