‘ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮ ವಹಿಸಲಾಗುವುದು’- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ13: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಚೇರಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು. ಮುಂದಿನ ವರ್ಷ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಚಂದ್ರಶೇಖರ್ ಕಂಬಾರ ಅವರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!