ನಾಳೆ ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ನಾಳೆ ಬೆಳಗ್ಗೆ 9.30ಕ್ಕೆ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ಸಿಇಟಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2023ರ ಮೇ 20 ಮತ್ತು ಮೇ 21 ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ಈ ಹಿಂದೆ ಜೂನ್ 12 ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಸುಮಾರು 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ವಿವರಗಳಲ್ಲಿ ಹೊಂದಾಣಿಕೆಯಾಗದ ಕಾರಣ ಫಲಿತಾಂಶದ ದಿನಾಂಕವನ್ನು ಮೂಂದುಡಲಾಗಿತ್ತು.