ಕಾರ್ಕಳ: ಮಾಜಿ ಸಚಿವ, ಶಾಸಕ ವಿ.ಸುನಿಲ್ ಕುಮಾರ್ ಆಸ್ಪತ್ರೆಗೆ ದಾಖಲು

ಕಾರ್ಕಳ, ಜೂ.15(ಉಡುಪಿ ಟೈಮ್ಸ್ ವರದಿ) ಮಾಜಿ ಸಚಿವ, ಕಾರ್ಕಳ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರು ಬೆನ್ನುನೋವಿನಿಂದ ಬಳಲುತ್ತಿದ್ದು, ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಆಗಿಂದಾಗ್ಗೆ ಸುನಿಲ್ ಕುಮಾರ್ ಬೆನ್ನುನೋವಿಗೆ ತುತ್ತಾಗುತ್ತಿದ್ದರು. ಇಂದು ಬೆನ್ನುನೋವು ಉಲ್ಬಣಗೊಂಡ ಕಾರಣ ಉಡುಪಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಹತ್ತು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿ, ಆಸ್ಪತ್ರೆಯಲ್ಲೇ ಇರುವಂತೆ ತಿಳಿಸಿರುವುದರಿಂದ ಸಾರ್ವಜನಿಕ ಸಭೆ ಸಮಾರಂಭಗಳಿಂದ ಅವರು ದೂರ ಉಳಿಯಲಿದ್ದಾರೆ ಎಂದು ಶಾಸಕರ ಕಚೇರಿಯಿಂದ ಅಧಿಕೃತ ಹೇಳಿಕೆ ಬಿಡುಗಡೆಗೊಳಿಸಿದೆ.

Leave a Reply

Your email address will not be published. Required fields are marked *

error: Content is protected !!