14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಸೆ.22ರಿಂದ 24ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 3 ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು, ಸೆ.22ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ.
ಕರಾವಳಿಯಲ್ಲಿ ಗರಿಷ್ಠ 4 ಮೀಟರ್‌ಗಳಷ್ಟು ಎತ್ತರ ಅಲೆಗಳು ಏಳುತ್ತಿದ್ದು, ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದ ರಿಂದ ಮೀನುಗಾರರು ಮಂಗಳವಾರ (ಸೆ.22) ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.