ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ಶಾಸಕ ಕಾಮತ್

ಮಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ಸು ಪಡೆಯುವ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಸ್ಪಷ್ಟವಾಗಿ ವಿರೋಧಿಸುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮತಾಂತರ ಎಂಬದು ಒಂದು ಸಾಮಾಜಿಕ ಪಿಡುಗು. ಇದು ಸಮಾಜದ ಅವನತಿಗೆ ಕಾರಣವಾಗಬಲ್ಲದು ಎನ್ನುವ ಸದುದ್ಧೇಶದಿಂದ ನಮ್ಮ ಸರಕಾರದ ಅವಧಿಯಲ್ಲಿ ಬಲವಂತದ ಮತಾಂತರ ನಿಷೇಧಿಸುವ ಕಾಯಿದೆ ಜಾರಿಗೊಳಿಸಲಾಗಿತ್ತು.‌ ಆದರೆ ಈಗ ಆಮಿಷಗಳನ್ನೊಡ್ಡಿ, ಬೆದರಿಸಿ ಮತಾಂತರ ಮಾಡುವವರಿಗೆ ಶಿಕ್ಷೆ ವಿಧಿಸುವ ಕಾನೂನನ್ನು ರದ್ದುಪಡಿಸುವ ನಿರ್ಧಾರ ಮೂಲಕ ಕಾಂಗ್ರೆಸ್ ಸಮಾಜಕ್ಕೆ ಏನು ಸಂದೇಶ ನೀಡಲು ಹೊರಟಿದೆ ?. ಮುಕ್ತವಾಗಿ ಮತಾಂತರಗೊಳಿಸಲು ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಆಹ್ವಾನ ನೀಡುತ್ತಿದೆಯೇ ? ಎಂದು ಅವರು ಪ್ರಶ್ನಿಸಿದ್ದಾರೆ.‌

ಬಲವಂತದಿಂದ ಮತಾಂತರ ಮಾಡುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆಗೊಳಪಡಿಸುವ ಕಾಯಿದೆಯನ್ನು ರದ್ದುಪಡಿಸುವ ಮೂಲಕ ರಾಜ್ಯದಲ್ಲಿ ಮತಾಂತರಿಗಳ ಅಟ್ಟಹಾಸಕ್ಕೆ ರತ್ನ ಕಂಬಳಿ ಹಾಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನಿರಂತರವಾಗಿ ಹಿಂದೂ ಸಮಾಜವನ್ನು ಒಡೆಯುವ ಕೃತ್ಯವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಶಾಸಕ ಕಾಮತ್ ಆರೋಪಿಸಿದ್ದಾರೆ.

ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ಸು ಪಡೆಯುವ ತನ್ನ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಇಡೀ ಹಿಂದೂ ಸಮಾಜ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

2 thoughts on “ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ಶಾಸಕ ಕಾಮತ್

  1. Respect MLA Sir instead of focusing on the growth of your constituency from where you have been elected , you are wasting your time in baseless allegations, people would have elected your party for powr again, but people understood you well and made you to sit in the opposition. When your party was in power you spoke development but on ground nothing concrete happened. Your party told the people we are there to protect Hindus. However your party neither was Hindu friendly or any other religion friendly. Your party was very busy in spreading lies as truth, , hatred, , creating violence. You literally concluded this country belongs to Hindus alone . This country is every citizen’s property. Your party will not not decide who will choose what for them the Constitution has decided already . It is better that you mind your business. All are not fools, they have intelligence and common sense. A government has to be people friendly and not Anti – people. When you were in power you filled your pocket and the well being of people.

  2. Respect MLA Sir instead of focusing on the growth of your constituency from where you have been elected , you are wasting your time in baseless allegations, people would have elected your party for powr again, but people understood you well and made you to sit in the opposition. When your party was in power you spoke development but on ground nothing concrete happened. Your party told the people we are there to protect Hindus. However your party neither was Hindu friendly or any other religion friendly. Your party was very busy in spreading lies as truth, , hatred, , creating violence. You literally concluded this country belongs to Hindus alone . This country is every citizen’s property. Your party will not not decide who will choose what for them the Constitution has decided for them already . It is better that you mind your business. All are not fools, they have intelligence and common sense. A government has to be people friendly and not Anti – people. When you were in power you filled your pocket and neglected the well being of people. It’s a time for to remorse for your loopholes.

Leave a Reply

Your email address will not be published. Required fields are marked *

error: Content is protected !!