ಮತಾಂತರ ನಿಷೇಧ ಕಾಯ್ದೆ ರದ್ದು ತೀರ್ಮಾನ -ವಿಶ್ವ ಹಿಂದೂ ಪರಿಷದ್ ಖಂಡನೆ
ಉಡುಪಿ: ಕರ್ನಾಟಕದಲ್ಲಿ ಹಿಂದುಗಳನ್ನು ಮೋಸದಿಂದ, ಆಮಿಷದಿಂದ ಮತ್ತು ಬಲವಂತವಾಗಿ ಮತಾಂತರ ಮಾಡುವ ಕೃತ್ಯದಿಂದ ರಕ್ಷಿಸಲು ಈ ಹಿಂದಿನ ಸರಕಾರ ಮತಾಂತರ ನಿಷೇಧ ಕಾಯಿದೆ ತಂದಿದ್ದು, ಈಗಿನ ಕಾಂಗ್ರೆಸ್ ಸರಕಾರ ಆ ಮತಾಂತರ ನಿಷೇಧ ಕಾಯಿದೆಯನ್ನು ರದ್ದುಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು ಇದೊಂದು ಹಿಂದೂ ವಿರೋಧಿ ಕೃತ್ಯವಾಗಿದೆ. ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ ಮತ್ತು ಈ ನಿರ್ಧಾರವನ್ನು ಹಿಂಪಡೆಯಲು ಆಗ್ರಹಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದರು.