ಬಿಜೆಪಿ ಸೋತರೆ ಕೇಂದ್ರದ ಯೋಜನೆ ಕಡಿತ ಹೇಳಿದ್ದರು- ಈಗ ಅದನ್ನೆ ಮಾಡುತ್ತಿದ್ದಾರೆ: ಡಿಕೆಶಿ
ಬೆಂಗಳೂರು, ಜೂ.15: ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು ‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳನ್ನು ಕಡಿತಗೊಳಿಸಲಾಗುವುದು’ ಎಂದು ಹೇಳಿದ್ದರು. ಈಗ ಅದನ್ನೆ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
ಗುರುವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ರಾಜಕೀಯ ಎಂದು ನಾನು ಈಗ ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಬಿಜೆಪಿಯವರು ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಅವರು ಟೀಕೆ ಮಾಡಲಿ. ಅದಕ್ಕೂ ಮುನ್ನ ಬಿಜೆಪಿ ನಾಯಕರು ನಡ್ಡಾ ಹೇಳಿಕೆ ಬಗ್ಗೆ ಉತ್ತರ ನೀಡಲಿ ಎಂದು ಆಗ್ರಹಿಸಿದರು.