ಗೃಹಜ್ಯೋತಿ ಅರ್ಜಿ ಸಲ್ಲಿಸ ಬೇಕೇ? ಇಲ್ಲಿದೆ ಮಾಹಿತಿ…..
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ” ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್‌ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲೂ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಗ್ರಾಮ ಪಂಚಾಯತ್, ನಾಡ ಕಚೇರಿ, ಎಲ್ಲಾ ವಿದ್ಯುತ್ ಕಚೇರಿಗಳಲ್ಲಿಯೂ ಈ ಯೋಜನೆಗೆ ನೋಂದಾವಣೆ ಮಾಡಿಕೊಳ್ಳಬಹುದು.
ಇನ್ನೂ ಮೊದಲ ದಿನವೇ ಬೆಳಗ್ಗೆಯಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ವೆಬ್ ಸೈಟ್ ಬೆಳಿಗ್ಗೆ 10 ಗಂಟೆ ನಂತರ ಸರ್ವರ್ ಡೌನ್ ಆಗಿತ್ತು.
ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55,000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.
Grahajyothi
Open the site