ಉಡುಪಿ: ಸಮಾಜ ಸೇವಕ ಸುನೀಲ್ ಸಾಲ್ಯಾನ್ ಕಡೆಕಾರ್ “ಸೇವಾ ರತ್ನ ಜಾನಪದ” ಪ್ರಶಸ್ತಿ
ಉಡುಪಿ: ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಮತ್ತು ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ರವಿವಾರ ಉಡುಪಿ ಅಮೃತ್ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಸಾಲಿಯಾನ್ ಕಡೆಕಾರ್ ಅವರಿಗೆ “ಸೇವಾ ರತ್ನ ಜಾನಪದ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸುನೀಲ್ ಸಾಲಿಯಾನ್ ಕಡೆಕಾರ್ ಅವರು ಚೈತನ್ಯ ಸೋಶಿಯಲ್ ವೆಲ್ಫೇರ್ ಫೌಂಡೆಶನ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಸ್ವಚ್ಛಭಾರತ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿ ಜನ ಜಾಗೃತಿಯನ್ನು ಮೂಡಿಸಿದ್ದರ ಜೊತೆಗೆ ಆರೋಗ್ಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕದ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ.ಬೀ. ವಿಜಯ ಬಲ್ಲಾಳ್. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಹಿರಿಯ ಜಾನಪದ ವಿದ್ವಾಂಸರಾದ ವೈ. ಎನ್.ಶೆಟ್ಟಿ, ಗಾಂಧಿಯನ್ ಸೆಂಟರ್ ಫಿಲೋಸೊಫಿಕಲ್ ಆರ್ಟ್ಸ್ & ಸೈಯನ್ಸ್ ನ ಪ್ರೊಫೇಸರ್ ವರದೇಶ ಹಿರೇಗಂಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ನಗರ ಸಭಾ ಸದಸ್ಯ ವಿಜಯ ಕೊಡವೂರು ಉಪಸ್ಥಿತರಿದ್ದರು.