ರಾಜ್ಯದಲ್ಲಿ ಇಳಿಮುಖದತ್ತ ಕೊರೋನಾ ಸೋಂಕು: 6,974 ಮಂದಿಗೆ ಪಾಸಿಟಿವ್, 9,073 ಡಿಸ್ಚಾರ್ಜ್!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು 9,073 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 26 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 83 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,082 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,00,728ಕ್ಕೆ ಏರಿಕೆಯಾಗಿದೆ.

ಇಂದು 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,32,450ಕ್ಕೆ ಏರಿಕೆಯಾಗಿದೆ. 93,153 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!