ಪ್ರತಿ ತಿಂಗಳ 3ನೇ ಶನಿವಾರ ಶಾಲೆಗಳಲ್ಲಿ ಬ್ಯಾಗ್ ರಹಿತ ದಿನದ ಆಚರಣೆ; ‘ಸಂಭ್ರಮ ಶನಿವಾರ’ -ಸುತ್ತೋಲೆ
ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಶಿಕ್ಷಣ ಇಲಾಖೆ ಸುತ್ತೋಲೆ
ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದ್ದು, 2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಿದೆ.
ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ಬ್ಲಾಕ್ ಹಾಗೂ ಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ಸಭೆಗಳಲ್ಲಿ ಮತ್ತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವುದು.
ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು DSERT ವೆಬ್ ಸೈಟ್ನಲ್ಲಿ lips/ dsarkarnataka.nic.in ಅಪ್ಲೋಡ್ ಮಾಡಿದ್ದು, ಸದರಿ ಕಲಿಕಾ ಸಾಮಗ್ರಿಗಳನ್ನು ಉಪಯೋಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಎಲ್ಲಾ ಶಿಕ್ಷಕರಿಗೆ ಮಾಹಿತಿ ಒದಗಿಸುವುದು ‘ಸಂಭ್ರಮ ಶನಿವಾರ’ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ CRP ಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ. ಮಾರ್ಗದರ್ಶನ ನೀಡುವುದು.
ಕಾರ್ಯಕ್ರಮದ ಯಶಸ್ಸಿಗೆ ತಮ್ಮೆಲ್ಲರ ಪಾಲ್ಗೊಳ್ಳುವಿಕೆಯನ್ನು ಅಪೇಕ್ಷಿಸಲಾಗಿದೆ. 2023-24 ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೂಢೀಕೃತ ವರದಿಯನ್ನು ಮಾಹೆವಾರು ಸಿದ್ಧಪಡಿಸಿ DSEEHT ಕಚೇರಿಯ ಇ.ವಿ.ಜಿ ಶಾಖೆಯ evgardserthe gmail.com ಮೇಲ್ ಗೆ ಸಲ್ಲಿಸುವುದು.