ಜೈನ ಮುನಿಶ್ರಿ ದೇಹದ ತುಂಡುಗಳು ಮರಣೋತ್ತರ ಪರೀಕ್ಷೆಗೆ ರವಾನೆ

ಬೆಳಗಾವಿ: ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಬರ್ಬರ ಹತ್ಯೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಆರೋಪಿಗಳು ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಮೃತದೇಹವನ್ನು ಬಿಸಾಕಿದ್ದರು.

ಶನಿವಾರ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ 25 ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ, ಟವೆಲ್ ಪತ್ತೆಯಾಗಿತ್ತು. 30 ಅಡಿ ಆಳದಲ್ಲಿ ತಲೆಯ 2 ಭಾಗ, ಕೈ, ಕಾಲು, ತೊಡೆ, ಹೊಟ್ಟೆ ಸೇರಿದಂತೆ 9 ಭಾಗಗಳು ಪತ್ತೆಯಾಗಿವೆ. ದೇಹದ ತುಂಡುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಮುನಿಶ್ರಿ ಅವರನ್ನು ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಲ್ಲಿಯೇ ಕೊಲೆ ಮಾಡಿದ ಆರೋಪಿಗಳು, ಶವವನ್ನು ಕಟಕಬಾವಿಗೆ ತಂದು, ತುಂಡುಗಳನ್ನಾಗಿ ಮಾಡಿ, ಬೋರ್ ವೆಲ್ ಒಳಗೆ ಹಾಕಿದ್ದರು. ಶನಿವಾರ ಬೆಳಗ್ಗೆಯಿಂದ ಸತತ 10 ಗಂಟೆ ಕಾರ್ಯಾಚರಣೆ ನಡೆಸಿದ ಪೊಲೀಸರು ಶವ ಹೊರ ತೆಗೆದರು. ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ಸಮಗ್ರವಾಗಿ ತನಿಖೆ ಮಾಡುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!