ಚರ್ಚ್ ನ ಫಾದರ್ ಲೈಂಗಿಕ ಕಿರುಕುಳ: ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ
ಕಲಬುರ್ಗಿ: ಚರ್ಚ್ ನ ಫಾದರ್ ಒಬ್ಬರು ನಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಸೇಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಚರ್ಚ್ ನ ಫಾದರ್ ಕ್ಲೀನರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತಮಗೆ ನ್ಯಾಯ ಕೊಡಿಸುವಂತೆ ಕಲಬುರ್ಗೀ ಕಮೀಷನರ್ ಕಚೇರಿಯಲ್ಲಿ ಆವರಣದಲ್ಲಿಯೇ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಚರ್ಚ್ನ ಫಾದರ್ ಕ್ಲೀವನ್ ಎಂಬುವವರು ಕೊಠಡಿ ಸ್ವಚ್ಛತೆ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮತ್ತೊಂದಡೆ ಸಿಸ್ಟರ್ ಆಂಥೋನಿ ಮೇರಿ ಸಂತ್ರಸ್ತೆಯ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಿಸಿಎನ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆಗೆ ಸಂತ್ರಸ್ತೆಯನ್ನುಸೆನ್ ಪೊಲೀಸರು ಕರೆದಿದ್ದರು. ಈ ವೇಳೆ ನನಗೆ ನ್ಯಾಯ ಸಿಗುತ್ತಿಲ್ಲ ಅಂತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. |