ದ್ವೇಷ, ಕುತಂತ್ರ, ವಂಚನೆ, ಹಿಂಸೆ ಬಿಜೆಪಿಯ ಆಧಾರ ಸ್ಥಂಬಗಳು-ಡಿಕೆಶಿ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣದ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದ್ವೇಷ, ಕುತಂತ್ರ, ವಂಚನೆ, ಹಿಂಸೆ ಇದು ಬಿಜೆಪಿಯ ಆಧಾರ ಸ್ಥಂಬಗಳು ಎಂದಿದ್ದಾರೆ.
ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣವನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದಂತೆ ಜುಲೈ 12ರಂದು ಫ್ರೀಡಂ ಪಾರ್ಕ್ನಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು.ಕಾಂಗ್ರೆಸ್ ನಾಯಕರು,ಮುಖಂಡರು ,ಕಾರ್ಯಕರ್ತರು ಹಾಗೂ ಬೆಂಬಲಿಗರು ಪಾಲ್ಗೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.