ಬ್ಯಾಡ್ಮಿಂಟನ್ ಆಡುವಾಗ ಕುಸಿದುಬಿದ್ದು ಲೋಕಾಯುಕ್ತ ಡಿವೈಎಸ್ಪಿ ಮೃತ್ಯು

ವಿಜಯಪುರ: ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ ನಾಯಕ  ಹೃದಯಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ಚಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳಿಯ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ಅರುಣ ನಾಯಕ ಸಾವಿಗೀಡಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅರುಣ ನಾಯಕ ಪುತ್ರ  ವೈದ್ಯರಾಗಿದ್ದು, ಪತ್ನಿ ಮಗನೊಂದಿಗೆ ಬೆಂಗಳೂರಿನಲ್ಲೇ ವಾಸವಿದ್ದಾರೆ.

Leave a Reply

Your email address will not be published. Required fields are marked *

error: Content is protected !!