ಉಡುಪಿ: ಜುಲೈ 27 ಶಾಲಾ ಕಾಲೇಜುಗಳಿಗೆ ರಜೆ- ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ರಜೆ ಇಲ್ಲ
ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 27ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.