ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ- 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು!

ಮಂಗಳೂರು : ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ಇದೀಗ ಪೊಲೀಸರು ಸರಿಯಾಗೇ ತಿರುಗೆಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಈಗಾಗಲೇ 222 ಮಂದಿ ವಾಹನ ಚಾಲಕರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸ್ಸು ಮಾಡಿದ್ದಾರೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 14 ದಿನದಲ್ಲಿ ಅಂದರೆ ಜುಲೈ 13 ರಿಂದ ಜುಲೈ 26 ರವರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿರುವ ಹಾಗೂ ಸಂಚಾರ ನಿಯಮ ಪಾಲನೆ ಮಾಡದೇ ಇರುವ ವಾಹನ ಚಾಲಕರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸು ಮಾಡಿದ್ದಾರೆ. ಸದ್ಯ 222 ಚಾಲಕರ ಚಾಲನಾ ಪರವಾನಿಗೆ ರದ್ದು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!