ಪುತ್ತೂರು: ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ- 2023 ಚಾಲನೆ

ಪುತ್ತೂರು: ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ತಾವು ಮಾಡುವ ಕೆಲಸದ ಬಗ್ಗೆ ಸ್ಪಷ್ಟತೆ ಇರಬೇಕು ಮತ್ತು ಆ ಕೆಲಸವನ್ನು ನಿಗದಿತ ಸಮಯದಲ್ಲಿ ಮುಗಿಸುವ ಛಲ ಇರಬೇಕು ಎಂದು ಎನ್‌ಐಟಿಕೆ ಸುರತ್ಕಲ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹಿತ್.ಪಿ. ತಹಿಲಿಯಾನಿ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ಯುನಿವರ್ಸಿಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2023ಕ್ಕೆ ಚಾಲನೆ ನೀಡಿ ಮಾತಾಡಿದರು. ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳ ಬೇಕು ಮತ್ತು ಅದರಿಂದ ಸಮಾಜಕ್ಕೆ ಒಳಿತಾಗುವ ಉತ್ಪನ್ನಗಳನ್ನು ತಯಾರಿಸುವಲ್ಲಿ ಶ್ರಮಿಸಬೇಕು ಎಂದರು.

ಕಂಪೆನಿಗಳು ಪ್ರತಿಭಾವಂತರಿಗೆ ಹೆಚ್ಚು ಅವಕಾಶಗಳನ್ನು ನೀಡುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಉತ್ಕ್ರಷ್ಟತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದರು. ಗೌರವ ಅತಿಥಿಗಳಾಗಿ ಆಗಮಿಸಿದ ಸುಲ್ತಾನೇಟ್ ಆಫ್ ಒಮನ್ ಮಸ್ಕತ್ತಿನ ಬ್ಯಾಂಕಿ0ಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ ಡಾ.ಆನಂದ್ ಸೂರ್ಯನಾರಾಯಣ ಮಾತನಾಡಿ ಜೀವನದಲ್ಲಿ ಸಾಮರ್ಥ್ಯ, ಸ್ಪರ್ಧೆ ಮತ್ತು ಬದಲಾವಣೆ ಈ ಮೂರು ವಿಷಯಗಳು ಅಗಾಧ ಪರಿಣಾಮವನ್ನು ಬೀರುತ್ತವೆ ಎಂದರು. ನಿರಂತರವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಸ್ಪರ್ಧಾತ್ಮಕವಾಗಿ ಉಳಿಯಲು ತಾಂತ್ರಿಕ ಪ್ರಗತಿಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಇನ್ನೋರ್ವ ಗೌರವ ಅತಿಥಿಯಾಗಿದ್ದ ಯುನಿವರ್ಸಿಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾದ ಪ್ರಾದೇಶಿಕ ವ್ಯವಸ್ಥಾಪಕಿ ಶಶಿರೇಖಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ಸಂಶೋಧನಾ ಸಂಸ್ಕöತಿಯನ್ನು ಪ್ರೋತ್ಸಾಹಿಸಿ ಬೆಳೆಸುವ ಸಂಸ್ಥೆಗಳಿಗೆ ತಮ್ಮ ವಿಶ್ವವಿದ್ಯಾನಿಲಯವು ನೆರವು ನೀಡುವುದಕ್ಕೆ ಬದ್ಧವಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!