ಉಡುಪಿ: ಬೈಲಕೆರೆ ನಿವಾಸಿ ನಾಪತ್ತೆ

ಉಡುಪಿ, ಜು.31: ಬೈಲಕೆರೆ ನಿವಾಸಿ ರವಿ ದೇವಾಡಿಗ (55) ಎಂಬ ವ್ಯಕ್ತಿಯು ಜುಲೈ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!