ಭಾರತೀಯ ವಾಯುಪಡೆಯಲ್ಲಿ ನೇಮಕಾತಿ- ನೋಂದಣಿಗೆ ಆ.17 ಕೊನೆಯ ದಿನ

ಉಡುಪಿ, ಜು.31: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಆಸಕ್ತ ಅವಿವಾಹಿತ ಯುವಕ ಹಾಗೂ ಯುವತಿಯರು ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

2003 ರ ಜೂನ್ 27 ರಿಂದ 2006 ರ ಡಿಸೆಂಬರ್ 27 ರ ನಡುವೆ ಜನಿಸಿರುವ, ಪಿಯುಸಿಯಲ್ಲಿ (ಕಲಾ, ಕಲೆ, ವಾಣಿಜ್ಯ, ವಿಜ್ಞಾನ, ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50 ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊ0ದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಆಗಸ್ಟ್ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ಮಣಿಪಾಲ, ಉಡುಪಿ ಅಥವಾ ವೆಬ್‌ಸೈಟ್ https://careerindianairforce.cdac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!