ರಾಹುಲ್ ವಿರುದ್ಧದ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ
ಹೊಸದಿಲ್ಲಿ: ಮೋದಿ ಸರ್ ನೇಮ್ ವಿಚಾರದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ.
ರಾಹುಲ್ ವಿರುದ್ಧದ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಹುಲ್ ಅರ್ಜಿ ವಿಚಾರಣೆ ನಡೆಸಿದ ಬಿಆರ್ ಘರ್ವಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರಿದ್ದ ಪೀಠ, ಉಚ್ಛಾರಣೆಗಳು ಉತ್ತಮ ಅಭಿರುಚಿಯಿಲ್ಲ ಎಂಬುದರಲ್ಲಿ ಸಂದೇಹವಿಲ್ಲ, ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಗಳು ಸಾರ್ವಜನಿಕ ಭಾಷಣಗಳನ್ನು ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.
ನಿಂದನೆ ಅರ್ಜಿಯಲ್ಲಿ ತಮ್ಮ ಅಫಿಡವಿಟ್ ಸ್ವೀಕರಿಸುವಾಗ, ಅವರು (ರಾಹುಲ್ ಗಾಂಧಿ) ಹೆಚ್ಚು ಎಚ್ಚರಿಕೆಯಿಂದ ಇರಬೇಕಿತ್ತು ಎಂದು ಪೀಠ ಹೇಳಿದೆ.
ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.