ಸ್ಥಳೀಯ ಮಟ್ಟದಲ್ಲಿ ಸ್ವಇಚ್ಛೆಯಿಂದ ಬಂದವರಿಗೆ ಎಲ್ಲರಿಗೂ ಕೋವಿಡ್ ಪರೀಕ್ಷೆ

ಮಂಗಳೂರು ಸೆ. 25: ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ.  


ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ ಸಾರ್ವಜನಿಕ ವಲಯದಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳನ್ನು ಅದೇ ವ್ಯಾಪ್ತಿಯಲ್ಲಿ ಬರುವಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ ಆಯಾಗ್ರಾಮ ಪಂಚಾಯತಿಗಳಲ್ಲಿನ ಕೋವಿಡ್-19 ಸೋಕಿತರು ಹಾಗೂ ಸ್ವಇಚ್ಛೆಯಿಂದ ಕೋವಿಡ್ ಪರೀಕ್ಷೆಯನ್ನು ಮಾಡಲು ಬಯಸುವ ವ್ಯಕ್ತಿಗಳಿಗೆ ಪರೀಕ್ಷೆ ನಡೆಸಿ ಒಂದು ವಾರದೊಳಗೆ ವರದಿ ನೀಡಲಾಗುವುದು.


ಗ್ರಾಮ ಪಂಚಾಯತಿವಾರು ದಿನಾಂಕವನ್ನು ನಿಗದಿಪಡಿಸಿದ್ದು ಆ ಬಗ್ಗೆ ಸ್ಥಳೀಯವಾಗಿ ತಿಳಿಸಿಕೋವಿಡ್ ಪರೀಕ್ಷೆಗಳನ್ನು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!