ಸಚಿವ ಚೆಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ: ಸಿಐಡಿ ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಕೃಷಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದುಬಂದಿದೆ.

ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಮಂಡ್ಯದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆನ್ನ ಲಾದ ಪತ್ರವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೃಹ ಸಚಿವರ ಜೊತೆ ಸಮಾಲೋಚನೆ ನಡೆಸಿದ್ದು, ಸುಧೀರ್ಘ ಚರ್ಚೆ ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!