ಉಮಾಶ್ರೀ, ಎಂ.ಆರ್. ಸೀತಾರಾಮ್ ಹಾಗೂ ಸುಧಾಮ್ ದಾಸ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನ
ಬೆಂಗಳೂರು, ಆ.15: ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈ.ಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಅಂತಿಮಗೊಳಿಸಿ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್. ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಂ.ಆರ್.ಸೀತಾರಾಮ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿರುವ ಹಿನ್ನೆಲೆ ರಾಜ್ಯಪಾಲರು ಸೀತಾರಾಮ್ ಕುರಿತು ಹೆಚ್ಚಿನ ಮಾಹಿತಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ನಾಳೆ ಮುಖ್ಯ ಕಾರ್ಯದರ್ಶಿ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.