ಕಾಂಗ್ರೆಸ್‌‌ಅನ್ನು ನಿರ್ಲಕ್ಷ್ಯ ಮಾಡಿದ ಪರಿಣಾಮ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡೆವು: ಸಿ.ಟಿ.ರವಿ

ಮೈಸೂರು,ಆ.18: ʼಲೋಕಸಭಾ ಚುನಾವಣೆಯಲ್ಲಿ ನಾವು ಕಾಂಗ್ರೆಸ್‌ನವರನ್ನು ನಿರ್ಲಕ್ಷ್ಯ ಮಾಡಲ್ಲ. ಅವರನ್ನು ನಿರ್ಲಕ್ಷ್ಯ ಮಾಡಿದ ಪರಿಣಾಮ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡೆವುʼ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಕಾಂಗ್ರೆಸ್‌ ನವರ ಗ್ಯಾರಂಟಿ ಚರ್ಚೆಗೆ ಕೌಂಟರ್ ಮಾಡಲಿಲ್ಲ. ಪೇ ಸಿಎಂ ಹೇಳಿದ್ದಾಗ ಕ್ರಮ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ಅನುಭವಿಸುತ್ತಿದ್ದೇವೆ. ಇದರಿಂದ ಡಿ.ಕೆ.ಶಿವಕುಮಾರ್ ಆಗಲಿ ಕಾಂಗ್ರೆಸ್ ಚಿಂತನೆಯನ್ನ ನಿರ್ಲಕ್ಷ್ಯ ಮಾಡಲ್ಲ. ನಾವು ಜನರ ಮುಂದೆ ಹೋಗುತ್ತೇವೆ. ನಮ್ಮ ತಪ್ಪು ತಿದ್ದುಕೊಂಡು ಮುಂದೆ ಹೋಗುತ್ತೇವೆʼ ಎಂದರು.

‘ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್‍ನಲ್ಲಿ ಇಲ್ಲ. ಪಕ್ಷ ಯಾವುದೇ ಹುದ್ದೆ ಕೊಟ್ಟರೂ ಕೆಲಸ ಮಾಡುತ್ತೇನೆ. ಪಕ್ಷ ಯಾವುದೇ ಹುದ್ದೆ ಕೊಟ್ಟರೂ ಕೆಲಸ ಮಾಡುತ್ತೇನೆʼ ಎಂದು ತಿಳಿಸಿದರು.

ʼಮಂತ್ರಿ ಇದ್ದಾಗ ಪಕ್ಷ ಸೂಚನೆ ಕೊಟ್ಟಾಗ ರಾಜೀನಾಮೆ ಕೊಟ್ಟು ಪಕ್ಷದ ಕೆಲಸದಲ್ಲಿ ತೊಡಗಿಸಿಕೊಂಡೆ. ನನ್ನ ಹೆಸರನ್ನು ಎಲ್ಲದಕ್ಕೂ ತೂರಿಸಲಾಗುತ್ತೆ. ಸದ್ಯ ವಿರೋಧ ಪಕ್ಷದ ರೇಸ್ ನಲ್ಲಿ ಎನ್ನುವುದನ್ನು ತೋರಿಸಿಲ್ಲ. ಅದು ಆಗಲು ಸಾಧ್ಯವಿಲ್ಲ. ಪಕ್ಷ ಬಯಸಿದರೆ ಕೆಲಸ ಮಾಡುತ್ತೇನೆʼ ಎಂದು ಸ್ಪಷ್ಟನೆ ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಟಿ ರವಿ, 28 ಸ್ಥಾನಗಳನ್ನ ಗೆಲ್ಲಲ್ಲು ಅಗತ್ಯ ಇರುವ ಎಲ್ಲಾ ಯೋಚನೆ ಮಾಡುತ್ತೇವೆ. ನಾವು 28 ಸ್ಥಾನ ಗೆಲ್ಲಬೇಕು. ಅದರ ಬಗ್ಗೆ ಯೋಚನೆ ಮಾಡುತ್ತೇವೆ. ದೇಶದ ಹಿತದೃಷ್ಟಿಯಿಂದ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಮುಂದಿನ ಅವಧಿಗೆ ವಿಶ್ವದ ಮೂರನೇ ಶಕ್ತಿಯಾಗಿ ಬೆಳೆಯಬೇಕು ಎಂಬುದು ಮೋದಿಯವರ ಆಶಯ. ಈ ಕಾರಣದಿಂದ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದರು.

ರಾಜ್ಯ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ಹೀಗಾಗಿ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನ ಗಳಿಸಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದ ಎರಡೇ ತಿಂಗಳಿಗೆ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜಿಲ್ಲಾವಾರು ಸಚಿವರು, ಶಾಸಕರ ಸಭೆ ನಡೆಸುತ್ತಿದ್ದಾರೆ. ನಮ್ಮ ಪಕ್ಷದ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಸರ್ಕಾರ ಆರು ತಿಂಗಳು ಇರುವುದಿಲ್ಲ ಎಂದಿದ್ದರು. ಹೀಗಾಗಿ ಕಾಂಗ್ರೆಸ್ ನವರು ಭಯಗೊಂಡಿದ್ದು ಅಭದ್ರತೆ ಕಾಡುತ್ತಿದೆ. ಪರಿಣಾಮ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ. ಆದರೆ ದೂರಾಲೋಚನೆ ಇರುವ ಯಾರೊಬ್ಬರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಈ ಬಗ್ಗೆ ನಮ್ಮ ಪಕ್ಷದ ಶಾಸಕರ ಜೊತೆಗೂ ಮಾತನಾಡುತ್ತೇನೆ. ಯಾರು ಕೂಡ ಅಷ್ಟು ಸುಲಭವಾಗಿ ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!