ಸರಕಾರಕ್ಕೆ ವಂಚಿಸಿ ಪಡೆದಿದ್ದ 4.59 ಲಕ್ಷ ಪಡಿತರ ಕಾರ್ಡ್ ರದ್ದು!

ಬೆಂಗಳೂರು, ಆ 21: ಅಕ್ರಮವಾಗಿ ಬಿಪಿಎಲ್ ಕಾರ್ಡ್‌ ಹೊಂದಿದವರಿಗೆ ಆಹಾರ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಬರೋಬ್ಬರಿ 4.59ಲಕ್ಷ ಕಾರ್ಡ್‌ ರದ್ದುಗೊಳಿಸಿದೆ. ಆ ಮೂಲಕ ಬಿಪಿಎಲ್ ಕಾರ್ಡ್‌ ಹೊಂದಿ ಸರ್ಕಾರಿ ಯೋಜನೆ ಪಡೆಯಲು ಹೊರಟಿದ್ದ ನಾಗರಿಕರ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಬಿಪಿಎಲ್ ಗೆ ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ. ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಾಚರಣೆ ಮೂಲಕ ಮೃತರ ಹೆಸರಿನಲ್ಲಿರುವ 4.59 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಮೂಲಕ ಅಕ್ರಮ ಕಾರ್ಡ್‌ ಹೊಂದುವವರ ವಿರುದ್ಧ ಮತ್ತಷ್ಟು ಬಿಗಿಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್‌ದಾರರಿದ್ದು , 4.36 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ.

Leave a Reply

Your email address will not be published. Required fields are marked *

error: Content is protected !!